ನವದೆಹಲಿ : .ಪ್ರಧಾನಿ ಮೋದಿ ಅವರು ಮನ್ ಕೀ ಬಾತ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಚಪ್ಪಾಳೆ ತಟ್ಟಿ ಅಥವಾ ತಟ್ಟೆ ಬಡಿದು ಅಡ್ಡಿಮಾಡುವ ಮೂಲಕ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸಿ ಎಂದು ಭಾರತೀಯ ಕಿಸಾನ್ ಯೂನಿಯನ್ ಕರೆ ನೀಡಿದೆ.
ಈ ಬಗ್ಗೆ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮಾತನಾಡಿದ್ದು, ಮಸೂದೆಗಳನ್ನು ಹಿಂಪಡೆಯದೇ ಹಠ ಹಿಡಿದು ಕುಳಿತಿರುವ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿದೆ ಎಂದಿದ್ದಾರೆ.
ನವೆಂಬರ್ 26ರಿಂದಲೂ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರು ಡಿಸೆಂಬರ್ 8ರಂದು ‘ಭಾರತ್ ಬಂದ್’ಗೆ ಕರೆ ಕೊಟ್ಟಿದ್ದರು. ಎಲ್ಲಾ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಕೊಡಬೇಕು. ಜೊತೆಗೆ ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾನೂನನ್ನು ವಾಪಸ್ ಪಡೆಯಲೇಬೇಕು ಎಂದು ಅನ್ನದಾತರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.