ಚಿತ್ರದುರ್ಗ ಮೆಡಿಕಲ್ ಕಾಲೇಜ್ ಪ್ರಾರಂಭಕ್ಕೆ ಜಿಲ್ಲಾ ಬಿ.ಜೆ.ಪಿ. ನಿಯೋಗ ಸಿ.ಎಂ. ಭೇಟಿ
ಚಿತ್ರದುರ್ಗ ದಲ್ಲಿ ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಮೆಡಿಕಲ್ ಕಾಲೇಜ್ ಪ್ರಸ್ತಾವನೆಗೆ ಸಂಬಂಧಪಟ್ಟಂತೆ ಇಂದು ಸಂಜೆ ಕಾವೇರಿ ನಿವಾಸದಲ್ಲಿ ಜಿಲ್ಲಾ ಬಿ.ಜೆ.ಪಿ. ನಿಯೋಗ ಜಿಲ್ಲಾಧ್ಯಕ್ಷರಾದ ಎ.ಮುರುಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀರಾಮುಲು ರವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರಿಗೆ ಭೇಟಿಯಾದರು. ಈ ಸಂದರ್ಭದಲ್ಲಿ ಚಿತ್ರದುರ್ಗ ನಗರದ ಮೆಡಿಕಲ್ ಕಾಲೇಜ್ ಸ್ಥಾಪನೆಗೆ ಸಂಬಂಧಪಟ್ಟಂತೆ ಅಗತ್ಯವಾದ ಮೂಲ ಸೌಕರ್ಯಗಳು ಸಿದ್ದವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ|| ಸುಧಾಕರ್ ರವರನ್ನು ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿರುವುದರೊಂದಿಗೆ ಕಾಲೇಜು ಆರಂಭಿಸಲು ಸಹಕಾರ ನೀಡುವುದಾಗಿ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಬಿ.ಜೆ.ಪಿ. ನಿಯೋಗದಲ್ಲಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಗೂಳಿಹಟ್ಟಿ ಡಿ.ಶೇಖರ್, ಶ್ರೀಮತಿ ಪೂರ್ಣಿಮ ಶ್ರೀನಿವಾಸ್, ಬಿ.ಜೆ.ಪಿ. ರಾಜ್ಯ ಕಾರ್ಯದರ್ಶಿ ಕೆ.ಎಸ್.ನವೀನ್, ರಾಜ್ಯ ಖನಿಜ ನಿಗಮ ಅಧ್ಯಕ್ಷರಾದ ಲಿಂಗಮೂರ್ತಿ, ಕರ್ನಾಟಕ ಅನುಸೂಚಿತ ಜಾತಿ/ಅನುಸೂಚಿತ ಬುಡಕಟ್ಟು ಆಯೋಗದ ರಾಜ್ಯ ಸದಸ್ಯರಾದ ಜಯಪಾಲಯ್ಯ ಉಪಸ್ಥಿತರಿದ್ದರು.
2020-21 ನೇ ಆಯವ್ಯಯದಲ್ಲಿ ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜ್ ಆರಂಭಕ್ಕೆ ಸಂಬಂಧಪಟ್ಟಂತೆ ಅನುದಾನವನ್ನು ಮೀಸಲಿಡಲು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಒತ್ತಾಯಿಸಿದರು.