ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಗಳ ಮೇಲೆ ನಡೆಯುವ ದೌರ್ಜನ್ಯವನ್ನು ಕಡಿಮೆ ಮಾಡುವಂತಹ ಅರಿವು ಕಾರ್ಯಕ್ರಮಗಳನ್ನು ಮಾಡಲು ಸಲಹೆ

ನಿತ್ಯವಾಣಿ,ಚಿತ್ರದುರ್ಗ, (ಜು.01) : ಉಪವಿಭಾಗ ಮಟ್ಟದ ಎರಡನೇ ತ್ರೈಮಾಸಿಕ ದೌರ್ಜನ್ಯ ಸಮಿತಿ ಸಭೆಯನ್ನು ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿತ್ತು,ಉಪವಿಭಾಗಾಧಿಕಾರಿ ಚಂದ್ರಯ್ಯ ಇವರು ಮಾತನಾಡಿ ಚಿತ್ರದುರ್ಗ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಗಳ ಮೇಲೆ ನಡೆಯುವ ದೌರ್ಜನ್ಯವನ್ನು ಕಡಿಮೆ ಮಾಡುವಂತಹ ಅರಿವು ಕಾರ್ಯಕ್ರಮಗಳನ್ನು ಸಮಾಜ ಕಲ್ಯಾಣ ಇಲಾಖೆಯವರು ಜಿಲ್ಲೆಯ ಎಲ್ಲ ಕಾರ್ಯನಿರ್ವಹಣಾಧಿಕಾರಿಗಳು ಮೇಲುಸ್ತುವಾರಿ ಮಾಡಲು ಸಲಹೆ ನೀಡಿದರು ಜಿಲ್ಲೆಯ ಎಲ್ಲ ತಹಸೀಲ್ದಾರ್ ಗಳು ಕಾರ್ಯನಿರ್ವಾಹಕಾಧಿಕಾರಿಗಳು ಡಿವೈಎಸ್ಪಿ ಪಾಂಡುರಂಗಪ್ಪ ಹಿರಿಯೂರು ಚಳ್ಳಕೆರೆ ಡಿವೈಸ್ ಹಾಜರಿದ್ದರು ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹಾಗೂ ಸದಸ್ಯ ಕಾರ್ಯದರ್ಶಿ ಪರಮೇಶ್ವರಪ್ಪ ಸಭೆಯಲ್ಲಿ ಉಪಸ್ಥಿತರಿದ್ದರು ನಾಮನಿರ್ದೇಶನ ಸದಸ್ಯ ರಾದ ಗೋಪಾಲಸ್ವಾಮಿ ನಾಯಕ ಲಲಿತಾ ಕೃಷ್ಣಮೂರ್ತಿ ಉಪಸ್ಥಿತರಿದ್ದರು

Leave a Reply

Your email address will not be published.