ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರಿಗೆ ಶುಗರ್ ಕಡಿಮೆ ಆಗಿ ಸ್ವಲ್ಪ ಸುಸ್ತಾಗಿದ್ದರು. ಕೂಡಲೇ ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಯಿತು. ಈಗ ಅವರು ಚೇತರಿಸಿಕೊಂಡಿದ್ದು, ಯಾವುದೇ ಆತಂಕ ಪಡುವುದು ಬೇಡ ಎಂದು ಶಾಸಕ ತಿಪ್ಪಾರೆಡ್ಡಿ ಹೇಳಿದ್ದಾರೆ.
ಚಿತ್ರದುರ್ಗ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಅವರು, ಸುದ್ದಿಗಾರರೊಂದಿಗೆ ಮಾತನಾಡಿ ಸದಾನಂದ ಗೌಡರು ಶುಗರ್ ಲೋ ಆಗಿದ್ದರಿಂದಾಗಿ ಅಸ್ವಸ್ಥರಾಗಿದ್ದರು. ಈಗ ಮಾತನಾಡುತ್ತಿದ್ದಾರೆ. ಈಗ ತಾನೇ ಕುಟುಂಬ ಸದಸ್ಯರೊಂದಿಗೆ ಫೆÇೀನ್‍ನಲ್ಲಿ ಮಾತನಾಡಿದ್ದಾರೆ. ಬಸವೇಶ್ವರ ಆಸ್ಪತ್ರೆಯ ತುರ್ತು ನಿಗಾ ಘಟಕದ ವೈದ್ಯರು ನಿಗಾದಲ್ಲಿಟ್ಟು, ಹೆಚ್ಚಿನ ಚಿಕಿತ್ಸೆ ಪರಿಶೀಲನೆ ನಡೆಸಲಾಗುತ್ತಿದೆ. ಅಗತ್ಯ ಬಿದ್ದರೇ ಕೂಡಲೇ ಅವರನ್ನು ಬೆಂಗಳೂರಿಗೆ ಕಳುಹಿಸಲಾಗುವುದು. ಅಭಿಮಾನಿಗಳು ಯಾವುದೇ ಕಾರಣಕ್ಕೂ ಆತಂಕ ಪಡುವುದು ಬೇಡ ಎಂದು ತಿಳಿಸಿದರು.
ಹೊಳಲ್ಕೆರೆ ಶಾಸಕ ಚಂದ್ರಪ್ಪ ಕೂಡ ಮಾತನಾಡಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಶುಗರ್ ಲೋ ಆಗಿದ್ದರಿಂದ ಅಸ್ವಸ್ಥಗೊಂಡಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಅವರ ಕುಟುಂಬಸ್ಥರೊಂದಿಗೂ ಡಿವಿ ಸದಾನಂದಗೌಡ ಮಾತನಾಡಿದ್ದಾರೆ. ಆರೋಗ್ಯವಾಗಿದ್ದಾರೆ, ಹೆದರುವಂತ ಯಾವುದೇ ಸಮಸ್ಯೆ ಆಗಿಲ್ಲ ಎಂಬುದಾಗಿ ಹೇಳಿದ್ದಾರೆ.
ಬಸವೇಶ್ವರ ಆಸ್ಪತ್ರೆಯ ಅಧೀಕ್ಷಕ ಪಲಾಕ್ಷಯ್ಯ ಮಾತನಾಡಿ, ಸಚಿವರು ಈಗ ಚೇತರಿಸಿಕೊಂಡಿದ್ದು, ಮಾತನಾಡುತ್ತಿದ್ದಾರೆ. ಇಸಿಜಿ ಎಲ್ಲಾ ನಾರ್ಮಲ್ ಇದ್ದು, ಹೆಚ್ಚಿನ ಚಿಕಿತ್ಸೆ ಕಳುಹಿಸಲು ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಏರ್ ಲಿಫ್ಟ್ ಬದಲಾಗಿ ರಸ್ತೆ ಸಂಚಾರದ ಮೂಲಕವೇ ಆಯಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆದೊಯ್ಯಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಕೂಡ ಸುದ್ದಿಗಾರರಿಗೆ ಮಾಹಿತಿ ನೀಡಿದ್ದು, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಆರೋಗ್ಯವಾಗಿದ್ದಾರೆ. ಶುಗರ್ ಲೋ ಆಗಿದ್ದರಿಂದಾಗಿ ಅಸ್ವಸ್ಥರಾಗಿದ್ದರು. ಹೀಗಾಗಿ ಚಿಕಿತ್ಸೆ ನೀಡಿದ ಬಳಿಕ ಆರೋಗ್ಯ ಸ್ಥಿರವಾಗಿದೆ. ಈಗ ಏನೂ ತೊಂದರೆ ಇಲ್ಲ ಎಂಬುದಾಗಿ ತಿಳಿಸಿದ್ದಾರೆ.