ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಗಡ್ಡ, ಕೂದಲನ್ನು ಟ್ರಿಮ್ ಮಾಡಿಕೊಂಡು ಕಾಣಿಸಿಕೊಳ್ಳುವ ಪ್ರಧಾನಿ ಮೋದಿ ಇತ್ತೀಚಿಗೆ ಹೇರ್ ಕಟ್, ಹಾಗೂ ಶೇವ್ ಮಾಡಿಸಿಕೊಳ್ಳುತ್ತಿಲ್ಲ. ದೇಶದಲ್ಲಿ ಲಾಕ್ ಡೌನ್ ಘೋಷಣೆಯಾದ ಬಳಿಕ ಟ್ರಿಮ್ ಮಾಡಿಸಿಕೊಂಡಿಲ್ಲ. ಅದಕ್ಕೆ ಕಾರಣ ಏನಿರಬಹುದು ಎಂಬ ಕುತೂಹಲ ಎಲ್ಲರಲ್ಲಿದೆ.
ಈ ಬಗ್ಗೆ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು, ಮೋದಿಯವರು ಗಡ್ಡ ಬಿಡಲು ಕಾರಣ ಏನು ಎಂಬುದನ್ನು ರಿವೀಲ್ ಮಾಡಿದ್ದಾರೆ.
ಪ್ರಧಾನಿ ಮೋದಿಯವರು ಅಯೋಧ್ಯೆ ರಾಮಮಂದಿರಕ್ಕೆ ಖುದ್ದಾಗಿ ಶಿಲಾನ್ಯಾಸ ಮಾಡಿದ್ದಾರೆ. ರಾಮ ಮಂದಿರ ನಿರ್ಮಾಣವಾಗುವವರೆಗೆ ಮೋದಿಯವರು ಕೇಶ ತೆಗೆಯುವುದಿಲ್ಲ ಎಂದು ಸಂಕಲ್ಪ ಮಾಡಿರಬಹುದು’ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.
ನನಗೆ ಅನಿಸಿದ್ದನ್ನು ನಾನು ಹೇಳಿದ್ದೇನೆ, ರಾಮಮಂದಿರ ನಿರ್ಮಾಣದ ಜವಾಬ್ದಾರಿಯನ್ನು ಅವರು ಹೊತ್ತಿರಬಹುದು. ಹಾಗಾಗಿ, ಮಂದಿರ ನಿರ್ಮಾಣವಾಗುವವರೆಗೂ ಕೇಶ ಗಡ್ಡ ತೆಗೆಯುವುದಿಲ್ಲ ಎಂದು ತೀರ್ಮಾನಿಸಿರಬಹುದು’ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.