ಜವನಗೊಂಡನಹಳ್ಳಿಯಲ್ಲಿ ಕನ್ನಡ ಮಾದರಿ ಶಾಲೆ ಉದ್ಘಾಟನೆ

ಚಿತ್ರದುರ್ಗ,ನಿತ್ಯವಾಣಿ, ಏ.03 :   ಸಂಸದ  ಎ. ನಾರಯಣಸ್ವಾಮಿ  ಮಾತನಾಡುತ್ತಾ ಸಿಎಸ್‍ಆರ್ ಅನುದಾನದಲ್ಲಿ ಜಿಲ್ಲೆಯ ಹಲವು ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ನಿರ್ಮಾಣ ಮಾಡುವ ಅಗತ್ಯವಿದೆ. ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ಉನ್ನತ ಮಟ್ಟದ ಸಾಧನೆ ಮಾಡಿರುವುದನ್ನು ನಾವು ಕಂಡಿದ್ದೇವೆ. ಜಿಲ್ಲೆಯು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 5ನೇ ಸ್ಥಾನದಲ್ಲಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ. ಹಾಗಾಗಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಮನವಿ ಮಾಡಿದರು.

ಜವನಗೊಂಡನಹಳ್ಳಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶುಚಿತ್ವ ಕಾರ್ಯಕ್ಕಾಗಿ ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದ ಪೌರ ಕಾರ್ಮಿಕರನ್ನು ನೇಮಿಸಬೇಕು ಎಂದು ಶಾಸಕಿ ಪೂರ್ಣಿಮಾ ಸಲಹೆ ನೀಡಿದರು.

ಶಾಲೆಗೆ ನಿರ್ವಹಣೆಗೆ ಗಮನ ಹರಿಸಲು ಹಾಗೂ ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ಪೌರಕಾರ್ಮಿಕರ ಅವಶ್ಯಕತೆ ಇದ್ದು, ಇದರಿಂದ ಸ್ವಚ್ಛತೆ ಕಾಪಾಡಲು ಸಾಧ್ಯವಾಗಲಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್‍ಬಾಬು ಮಾತನಾಡಿ, ಜವನಗೊಂಡನಹಳ್ಳಿ ಸರ್ಕಾರಿ ಶಾಲೆಯನ್ನು ಮಾದರಿಯಾಗಿ ನಿರ್ಮಾಣ ಮಾಡಲಾಗಿದೆ. ಒಂದು ಕೊಠಡಿಯಲ್ಲೂ ನೀತಿ ಕಥೆಗಳನ್ನು ಚಿತ್ರಿಸಿ, ಕಲಿಕೆಗೆ ಪೂರಕವಾದ ವಾತಾವರಣ ಸೃಷ್ಠಿಸಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

 

 

Leave a Reply

Your email address will not be published.