ಬೆಂಗಳೂರು : ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, 2020-21 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ. ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ದಿನಾಂಕ 05:03:2021 ರೊಳಗಾಗಿ ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳ ಇಲಾಖೆ ಪ್ರಕಟಣೆ ಹೊರಡಿಸಿದೆ. ವಿದ್ಯಾರ್ಥಿಗಳು www.ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.