ಬೆಂಗಳೂರು : ಪಂಚಮಸಾಲಿ 2 ಎ ಮೀಸಲಾತಿಗೆ ಆಗ್ರಹಿಸಿ ಫೆ.21 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ತುಮಕೂರಿನಲ್ಲಿ ಬಸವಮೃತ್ಯುಂಜಯ ಶ್ರೀ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
ಖಾಸಗಿ ಹೋಟೆಲ್ ನಲ್ಲಿ ನಡೆದ ಸಭೆ ಬಳಿಕ ಶ್ರೀಗಳು ಹೇಳಕೆ ನೀಡಿದ್ದಾರೆ. ಬೆಂಗಳೂರಿನ ನೈಸ್ ರಸ್ತೆ ಬಳಿ ಸಮಾವೇಶ ನಡೆಸಲು ನಿರ್ಧರಿಸಲಾಗಿದ್ದು, ಸಮಾವೇಶದ ಮೂಲಕ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಲಾಗುತ್ತಿದೆ. ವಿಧಾನಸೌಧ ಮುತ್ತಿಗೆ ನಿರ್ಧಾರವನ್ನು ಕೈ ಬಿಡಲಾಗಿದೆ. ಫೆ.21 ರಂದು ಸಮಾವೇಶ ನಡೆಸುವ ಮೂಲಕ ಪಂಚಮಸಾಲಿ 2 ಎ ಮೀಸಲಾತಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ಗಮನ ಸೆಳೆಯುತ್ತೇವೆ ಎಂದು ಶ್ರೀಗಳು ಹೇಳಿದರು.
ಸಮುದಾಯದ ಜನರು, ಪ್ರತಿನಿಧಿಗಳು ಸೇರಿದಂತೆ ಸಮಾವೇಶದಲ್ಲಿ ಸುಮಾರು 10 ಲಕ್ಷ ಜನರು ಭಾಗಿಯಾಗಲಿದ್ದಾರೆ. ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದ ಜನರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಶ್ರೀಗಳು ಹೇಳಿದರು. ಪಂಚಮಸಾಲಿ ಸಮಾಜವನ್ನು 2 ಎ ಮೀಸಲಾತಿ ಸೇರಿಸುವಂತೆ ಆಗ್ರಹಿಸಿ ರಾಜ್ಯದಲ್ಲಿ ಹೋರಾಟ ನಡೆಯುತ್ತಿದ್ದು, ಬಗ್ಗೆ ರಾಜ್ಯ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತೆ ಎಂಬುದನ್ನು ಕಾದು ನೋಡಬೇಕು.