ನಿತ್ಯವಾಣಿ,ಚಿತ್ರದುರ್ಗ,(ಸೆ.26) : ಲಿಂಗಾಯತ ಪಂಚಮಸಾಲಿ ಮೀಸಲಾತಿ ಬೇಡಿಕೆಗಾಗಿ ಮತ್ತೆ ಹೋರಾಟ ನಡೆಸಲಿದ್ದು ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರ ಆದೇಶದಂತೆ ಚಿತ್ರದುರ್ಗದಲ್ಲಿ ಪಂಚಮಸಾಲಿ ಸಮುದಾಯದವರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ನಗರದ ಪ್ರವಾಸಿ ಮಂದಿರಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿ ಉಸ್ತುವಾರಿ SML ತಿಪ್ಪೇಸ್ವಾಮಿ ಹೇಳಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿ ಈ ಹಿಂದೆ ಪಂಚಮಸಾಲಿ 2 ಎ ಮೀಸಲಾತಿಗೆ ಹೋರಾಟ ನಡೆದಿದೆ. ಈಗಾಗಲೇ ಪಾದಯಾತ್ರೆ ಮಾಡಿದ್ದೇವೆ. ಅಧಿವೇಶನದಲ್ಲಿ ಯಡಿಯೂರಪ್ಪ ನವರು ಸಿಎಂ ಮಾತುಕೊಟ್ಟಿದ್ದರು. ಆರು ತಿಂಗಳೊಳಗೆ ಬೇಡಿಕೆ ಈಡೇರಿಸುತ್ತೇವೆ ಎಂದಿದ್ದರು. ಅವರ ಮಾತು ಸೆಪ್ಟಂಬರ್ ೧೫ ಕ್ಕೆ ಮುಕ್ತಾಯವಾಗ್ತಿದೆ. ಹೀಗಾಗಿ ನಾವು ಮತ್ತೊಮ್ಮೆ ಹೋರಾಟ ಮಾಡ್ತೇವೆ ಎಂದರು.
ದಿನಾಂಕ 28 ರಂದು ಬೆಳಗ್ಗೆ10.30ಕ್ಕೆ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಸಭೆ ನಡೆಯಲಿದ್ದು, ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಸಾನಿಧ್ಯದಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ್, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹರಿಹರ ಮಾಜಿ ಶಾಸಕ ಶಿವಶಂಕರ್, ಇತರರು ಭಾಗವಹಿಸಲಿದ್ದಾರೆ ಎಂದರು.
ಸಭೆಯಲ್ಲಿ ಜಿತೇಂದ್ರ ಎನ್ ಹುಲಿಕುಂಟೆ, ವೀರಶೈವ ಯುವ ವೇದಿಕೆ ಜಿಲ್ಲಾಧ್ಯಕ್ಷ ಹೆಚ್ ಎಂ ಮಂಜುನಾಥ್ , ವೀರಭದ್ರಪ್ಪ, ಗಿರೀಶ, ನಾಗಣ್ಣ, ಚಿದಾನಂದ್, ಗಾರೇಹಟ್ಟಿ ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಸ್ವಾಮಿ, ಮುರುಗೇಶ್, ನಾಗರಾಜ್ ನಂದಿಪುರ, ಕಾರ್ತಿಕ್ ಬಿ ವಿ ಕೆ ಎಸ್ ಇದ್ದರು.