ಹಾಸನ : ಕರ್ತವ್ಯ ನಿರತ ಪಿಡಿಒ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಆಲೂರು ತಾಲೂಕಿನ ಮಡಬಲು ಗ್ರಾಮದ ಪಿಡಿಒ ಮೊಹಮ್ಮದ್ ಮೆಣಸು ಬಳ್ಳಿ ಕೊಡಸಲಿಲ್ಲ ಎಂಬ ಕಾರಣಕ್ಕೆ ಅದೇ ಗ್ರಾಮದ ಪುಟ್ಟರಾಜು ಗಲಾಟೆ ಮಾಡಿದ್ದ.ಇದರಿಂದ ಆಕ್ರೋಶಗೊಂಡ ಪಿಡಿಒ ಮೊಹಮ್ಮದ್, ಆಲೂರು ಪೊಲೀಸ್ ಠಾಣೆಯಲ್ಲಿ ಪುಟ್ಟರಾಜು ವಿರುದ್ಧ ದೂರು ದಾಖಲಿಸಿದ್ದರು.ಇದರಿಂದ ರೊಚ್ಚಿಗೆದ್ದ ಪುಟ್ಟರಾಜು, ಪಿಡಿಒ ಮೊಹಮ್ಮದ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ.ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಪಿಡಿಒ ಮೊಹಮ್ಮದ್‌ರನ್ನ ಆಲೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಸದ್ಯ ಪ್ರಕರಣ ಸಂಬಂಧ ಆಲೂರು ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಆರೋಪಿ ಪುಟ್ಟರಾಜುರನ್ನ ಪೊಲೀಸರು ಬಂಧಿಸಿದ್ದಾರೆ.