ಹಾಸನ : ಕೋವಿಡ್ ನಿಯಮ ಉಲ್ಲಂಘಿಸಿ ಮಧು ಮಗಳು ದಂಡ ಕಟ್ಟಿದ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ ನಡೆದಿದೆ.
ಮಾಸ್ಕ್ ಧರಿಸದ ಮಧು ಮಗಳಿಗೆ ದಂಡ ವಿಧಿಸಲಾಗಿದ್ದು, ಮದುವೆ ಮುಗಿಸಿ ಹೊರಡುವ ವೇಳೆ ಮಾಸ್ಕ್ ಹಾಕದೇ ಇದ್ದ ವಧುಗೆ ಸ್ಥಳದಲ್ಲೇ ಇದ್ದ ತಹಶೀಲ್ದಾರ್ ರೇಣುಕುಮಾರ್ 100 ದೂ ದಂಡ ವಿಧಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸ್ಪೋಟ ಮುಂದುವರೆದಿದ್ದು, ಈ ಹಿನ್ನೆಲೆ ರಾಜ್ಯ ಸರ್ಕಾರ ಕೆಲವು ಕಠಿಣ ಕ್ರಮಗಳನ್ನು ಜಾರಿಗೆ ತಂದಿದೆ. ಮದುವೆ, ಶುಭ ಸಮಾರಂಭಕ್ಕೆ ಅನುಮತಿಯೊಂದಿಗೆ 50 ಜನರಿಗೆ ಮಾತ್ರ ಅನುಮತಿ ನೀಡಲಾಗಿದೆ. ಅಲ್ಲದೇ ಮದುವೆ ಸಮಾರಂಭಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿದೆ.