ನಿತ್ಯವಾಣಿ, ಚಿತ್ರದುರ್ಗ,(ಅ.09) : ಬಿಜಿಪಿ ಸರ್ಕಾರದಲ್ಲಿ ಬಿ.ಎಸ್. ಯಡಿಯೂರಪ್ಪ ನಂತರದಲ್ಲಿ ಬಸವರಾಜ ಬೋಮ್ಮಾಯಿ ಅವರಿಗೆ ಸಿಎಮ್ ಸ್ಥಾನ ನೀಡಿದ ನಂತರ ಲಿಂಗಾಯತರ ಪ್ರಶ್ನಾತೀತ ನಾಯಕರಾಗಿ ಹೊರಹಮ್ಮಿಲ್ಲ ಎಂಬುದನ್ನು ಅರಿತಿರುವ ಕಾಂಗ್ರೇಸ್ ಪಕ್ಷವು ಕರ್ನಾಟಕದಲ್ಲಿ ಲಿಂಗಾಯತ ಮುಖಂಡರಿಗೆ ಪಕ್ಷ ಸಂಘಟನೆಯಲ್ಲಿ ಕಾರ್ಯಾಧ್ಯಕ್ಷ , ಸಮನ್ವಯ ಸಮಿತಿ, ಪ್ರಚಾರ ಸಮೀತಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆ ಮಾಡಲು ಕಾಂಗ್ರೆಸ್ ಹೈ ಕಮಾಂಡನಲ್ಲಿ ಚಿಂತನೆ ಆರಂಭವಾಗಿದ್ದು ಪ್ರಮುಖ ಹುದ್ದೆಗಳಿಗೆ ರಾಜ್ಯದ ಪ್ರಭಾವಿ ಪಂಚಮಸಾಲಿ ಲಿಂಗಾಯತ ಸಮಾಜದ ಮುಖಂಡರಾದ ಹುನಗುಂದ ಮತಕ್ಷೆತ್ರದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅವರಿಗೆ ಪಕ್ಷದಲ್ಲಿ ಪ್ರಮುಖ ಹುದ್ದೆ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ಚಿತ್ರದುರ್ಗ ಜಿಲ್ಲಾ ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾಧ್ಯಕ್ಷ ಎಚ್ ಎಂ ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಎಂ ಎಸ್ ಗಿರೀಶ್ ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ಯೋಗೀಶ್, ಹೊಸದುರ್ಗ ತಾಲ್ಲೂಕು ಅಧ್ಯಕ್ಷ ಮಂಜುನಾಥ್ ಹಾಗೂ ನರಗುಂದದಲ್ಲಿ ರಾಜ್ಯ ಪಂಚಮಸಾಲಿ ರೈತ ಘಟಕದ ಅಧ್ಯಕ್ಷ ಅಮರೇಶ ಮ.ನಾಗೂರ,ಲಿಂಗಾಯತ ಪಂಚಮಸಾಲಿ ತಾಲೂಕಾ ಅಧ್ಯಕ್ಷ ಶಂಕರಣ್ಣ ನೇಗಲಿ ,ಯುವ ಅಧ್ಯಕ್ಷ ಬಸವರಾಜ ಹೊಸೂರ, ಪ್ರದಾನಕಾರ್ಯದರ್ಶಿ ಮಹಾಂತೇಶ ಮದರಿ, ಸಂಘಟನಾ ಕಾರ್ಯದರ್ಶಿ ಮುತ್ತಣ್ಣ ಗಂಜಿಹಾಳ, ಶರಣಪ್ಪ ಹೊಸೂರ, ಮಹಾಂತೇಶ ಸುಂಕದ,ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡಲು ಒತ್ತಾಯಿಸಿದ್ದಾರೆ.