ವಿಜಯವಾಡ: ಲ್ಯಾಂಡಿಂಗ್ ವೇಳೆ 64 ಪ್ರಯಾಣಿಕರಿಂದ ವಿಮಾನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಭಾರೀ ಅನಾಹುತವೊಂದು ತಪ್ಪಿದೆ.
ಗನ್ನಾವರಮ್ ನಲ್ಲಿರುವ ವಿಜಯವಾಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ಆಗುತ್ತಿತ್ತು. ಈ ವೇಳೆ ರನ್ ವೇಯಲ್ಲಿ ಸ್ವಲ್ಪ ಬಲಕ್ಕೆ ವಿಮಾನ ಲ್ಯಾಂಡ್ ಆಗಿದ್ದರಿಂದ ರನ್ ವೇ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಯಾವ ಪ್ರಯಾಣಿಕರಿಗೂ ಗಾಯಗಳಾಗಿಲ್ಲ. ಇನ್ನು ವಿಮಾನದಲ್ಲಿದ್ದ 64 ಪ್ರಯಾಣಿಕರು ಮತ್ತು ವಿಮಾನ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಜಿ ಮಧುಸೂದನ್ ರಾವ್ ತಿಳಿಸಿದ್ದಾರೆ.