ಬೆಂಗಳೂರು: ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಎಎಸ್‌ಐ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಶನಿವಾರ (ಫೆ.27) ನಡೆದಿದೆ.
ರಂಗಸ್ವಾಮಯ್ಯ (59) ಸಾವನ್ನಪ್ಪಿದ ಎಎಸ್‌ಐ. ಇವರು ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಸಂಜೆ 4 ಗಂಟೆ ಸಮಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತವಾಗಿದೆ.ತಕ್ಷಣ ರಂಗಸ್ವಾಮಯ್ಯ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ತೆರಳುವಾಗ ಮಾರ್ಗ ಮಧ್ಯೆಯೇ ಅಸುನೀಗಿದ್ದಾರೆ. ರಂಗಸ್ವಾಮಯ್ಯರ ಸಾವಿಗೆ ಅವರ ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಿದ್ದಾರೆ.