ಪೊಲೀಸ್ ವರ್ಗಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ‘ಗುಡ್ ನ್ಯೂಸ್’

ಪೊಲೀಸ್ ಅಧಿಕಾರಿಗಳ ವರ್ಗಾವಣೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದೆ. ಇನ್ನು ಮುಂದೆ ವರ್ಗಾವಣೆ ಅವಧಿಯನ್ನು ಕನಿಷ್ಠ ಎರಡು ವರ್ಷಗಳಿಗೆ ನಿಗದಿಪಡಿಸಲು ಚಿಂತನೆ ನಡೆಸಲಾಗಿದೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಈ ವಿಷಯ ತಿಳಿಸಿದ್ದು, ಪ್ರಸ್ತುತ ಪೊಲೀಸ್ ಅಧಿಕಾರಿಗಳನ್ನು ವರ್ಷದೊಳಗೆ ವರ್ಗಾವಣೆ ಮಾಡಲಾಗುತ್ತಿದೆ. ಇದರಿಂದಾಗಿ ಅಧಿಕಾರಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇನ್ನು ಮುಂದೆ ಒಂದು ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿಗಳನ್ನು ಎರಡು ವರ್ಷ ಪೂರ್ಣಗೊಳ್ಳುವವರೆಗೆ ವರ್ಗಾವಣೆ ಮಾಡದಿರುವ ಕುರಿತಂತೆ ನಿಯಮ ಜಾರಿ ಮಾಡುವ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.ಪೊಲೀಸ್ ಅಧಿಕಾರಿಗಳು ಒಂದು ಸ್ಥಳಕ್ಕೆ ವರ್ಗಾವಣೆಗೊಂಡ ಸಂದರ್ಭದಲ್ಲಿ ಅಲ್ಲಿನ ಪರಿಸ್ಥಿತಿಯನ್ನು ಅರಿತುಕೊಳ್ಳುವುದರೊಳಗಾಗಿ ಒಮ್ಮೊಮ್ಮೆ ವರ್ಗಾವಣೆ ಮಾಡಲಾಗುತ್ತಿತ್ತು. ಇದರಿಂದಾಗಿ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ. ಇದೀಗ ರಾಜ್ಯ ಸರ್ಕಾರ ವರ್ಗಾವಣೆ ನಿಯಮ ಬದಲಾಯಿಸಲು ಮುಂದಾಗಿರುವುದು ಸ್ವಾಗತಾರ್ಹವಾಗಿದೆ.

Leave a Reply

Your email address will not be published.