ಹೊಸವರ್ಷ ಆಚರಣೆ ಮಾಡುವವರು ಹುಷಾರ್:: ಚಿತ್ರದುರ್ಗ ಜಿಲ್ಲಾ ಪೊಲೀಸ್ ಹೊಸ ವರ್ಷ ವರ್ಷ ಆಚರಣೆಗೆ ಸಂಬಂಧಿಸಿದ ಮಾರ್ಗಸೂಚಿ

ಚಿತ್ರದುರ್ಗ ಜಿಲ್ಲಾ ಪೊಲೀಸ್ ಹೊಸ ವರ್ಷ ವರ್ಷ ಆಚರಣೆಗೆ ಸಂಬಂಧಿಸಿದ ಮಾರ್ಗಸೂಚಿಗಳು,  ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಹೊಸವರ್ಷದ ಸಂಭ್ರಮಾಚರಣೆಯನ್ನು ಸರಳವಾಗಿ ಮತ್ತು ಅರ್ಥಗರ್ಭಿತವಾಗಿ ಆಚರಿಸುವ ನಿಟ್ಟಿನಲ್ಲಿ ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಜನರು ಸೇರುವ ಸಾಮೂಹಿಕ ಕೂಟಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಹೆಚ್ಚು ಜನಸಂಖ್ಯೆಯುಳ್ಳ ವಸತಿ ಸಮುಚ್ಚಯಗಳಲ್ಲಿ ಹಾಗೂ ಜನ ಸೇರುವ ತಕ್ಕಂತಹ ಸ್ಥಳಗಳಲ್ಲಿ ಆಯೋಜಿಸುವುದು ನಿಷೇಧಿಸಲಾಗಿದೆ. ದಿನಾಂಕ. 30-12-2020 ರಿಂದ  02-01-2020 ರವರೆಗೆ      ಕ್ಲಬ್, ಪಬ್ಬು, ರೆಸ್ಟೋರೆಂಟ್, ಹಾಗೂ ಅದೇ ತೆರನಾದ ಸ್ಥಳ ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೆ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡಿದ ವಿಶೇಷ ಕಾರ್ಯಕ್ರಮಗಳನ್ನು ವಿಶೇಷ ಪಾರ್ಟಿ ಇತ್ಯಾದಿಗಳನ್ನು ನಿಷೇಧಿಸಿದೆ, ಕ್ಲಬ್ ರೆಸ್ಟೋರೆಂಟ್ಗಳನ್ನು ಪ್ರತಿನಿತ್ಯ ತೆರೆದಿದ್ದು ನಡೆಸಲು ನಿರ್ಬಂಧವಿಲ್ಲ, ಹೊಸ ವರ್ಷಾಚರಣೆಯ  ಸಾರ್ವಜನಿಕ ಸ್ಥಳಗಳಲ್ಲಿ ಮುಖ್ಯರಸ್ತೆಗಳಲ್ಲಿ ಮತ್ತು ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಸೇರುವಿಕೆ ಯನ್ನು ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಿದೆ. ಆದರೆ ಈ ಸ್ಥಳಗಳಲ್ಲಿ ಪ್ರತಿನಿತ್ಯದ ಸಾಮಾನ್ಯ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳಲು ನಿರ್ಬಂಧವಿಲ್ಲ,65 ವರ್ಷ ಮೇಲ್ಪಟ್ಟವರು ಮತ್ತು10 ವರ್ಷದೊಳಗಿನ ಮಕ್ಕಳು ಮನೆಯಲ್ಲಿ ಇರತಕ್ಕದ್ದು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್  ದರಿಸುವುದು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಹೋಟೆಲುಗಳು ರೆಸ್ಟೋರೆಂಟುಗಳು ಹಾಗೂ ಅಂತಹ ಪ್ರದೇಶಗಳಲ್ಲಿ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡ ತಕ್ಕದ್ದು,     ಹೋಟೆಲುಗಳು, ಮಾಲ್ಗಳು ,ರೆಸ್ಟೋರೆಂಟುಗಳು, ಹಾಗೂ ಅಂತಹ ಸ್ಥಳ ಪ್ರದೇಶಗಳಲ್ಲಿ ಅದರ ಮಾಲೀಕರು ಕಡ್ಡಾಯವಾಗಿ ಸರ್ಕಾರದ ಆದೇಶದಂತೆ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರದಿಂದ ಜನರು ಸೇರಲು ವಹಿಸುವುದು ಅಗತ್ಯವಿದ್ದಲ್ಲಿ ಜನರನ್ನು ಸರದಿಯಲ್ಲಿ ಪ್ರವೇಶಿಸಲು ಅಥವಾ ಆನ್ಲೈನ್ ಮುಖಾಂತರ ಪದ್ಧತಿಯಲ್ಲಿ ಸ್ಥಳ ಕಾಯ್ದಿರಿಸಲು ವ್ಯವಸ್ಥೆಯನ್ನು ಕಲ್ಪಿಸುವುದು, ಉಪಹಾರ ಸ್ಥಳಗಳಲ್ಲಿ ವ್ಯವಸ್ಥಿತ ಕಟ್ಟಡ ಸಮುಚ್ಚಯಗಳಲ್ಲಿ ಜನರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ವ್ಯವಸ್ಥೆ ಕಲ್ಪಿಸುವುದು, ಸರ್ಕಾರದ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಹಸಿರು ಪಟಾಕಿಗಳನ್ನು ಮಾತ್ರ ಉಪಯೊಗಮಾಡತಕ್ಕದ್ದು ,ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಅರಣ್ಯ ಮತ್ತು ಪ್ರವಾಸೋದ್ಯಮ ಇಲಾಖೆಯ ವಸತಿ ಗೃಹಗಳು ಹೋಟೆಲ್ಗಳು, ರೆಸಾರ್ಟ್ಸ್, ರೆಸ್ಟೋರೆಂಟುಗಳು, ಪ್ರೇಕ್ಷಣೀಯ ಸ್ಥಳಗಳಲ್ಲಿ ಶೇಕಡ 50 ರಷ್ಟು ಜನರು ಮಾತ್ರ ಸೇರುವ ಷರತ್ ಒಳಪಟ್ಟುಅನುಮತಿಯನ್ನು ಶೇ 50ಕ್ಕಿಂತ ಹೆಚ್ಚು ಜನರಿಗೆ ಅವಕಾಶ ಮಾಡಿ ಕೋವಿಡ್-19 ಸೋಂಕು ನಿಯಂತ್ರಣ ಕ್ರಮಗಳನ್ನು ಉಲ್ಲಂಘಿಸಿದಲ್ಲಿ ಶಿಸ್ತಿನ ಕಾನೂನು ಕ್ರಮ ಜರುಗಿಸಲಾಗುವುದು,, ಹೊಸ ವರ್ಷದ ಸಂಭ್ರಮಾಚರಣೆ ಸಂಬಂಧ ವ್ಯಾಪ್ತಿಯಲ್ಲಿರುವ ಅರಣ್ಯ ಮತ್ತು ಪ್ರವಾಸೋದ್ಯಮ ಇಲಾಖೆಯ ವಸತಿ ಗೃಹಗಳು ಹೋಟೆಲ್ಗಳು ರೆಸಾರ್ಟ್ಸ್ ರೆಸ್ಟೋರೆಂಟುಗಳು ಪ್ರೇಕ್ಷಣೀಯ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ,   ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರ ವಿರುದ್ಧ ಶಿಸ್ತಿನ ಕಾನೂನು ಕ್ರಮ ಜರುಗಿಸಲಾಗುವುದು

Leave a Reply

Your email address will not be published.