ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

ನವದೆಹಲಿ : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನರಾಗಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಆಗಸ್ಟ್ 10 ರಂದು ಅವರನ್ನ ದೆಹಲಿಯ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದರು, ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.


ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಅವರನ್ನ ಆರ್ಮಿ ಆಸ್ಪತ್ರೆಯಲ್ಲೇ ವೆಂಟಿಲೇಷನ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ 5.45 ಕ್ಕೆ ವಿಧಿವಶರಾಗಿದ್ದಾರೆ.1935 ಡಿಸೆಂಬರ್ 11 ರಂದು ಜನಿಸಿದ ಪ್ರಣಬ್ ಮುಖರ್ಜಿ, ಲೋಕಸಭೆಯ ನಾಯಕರಾಗಿ, ಕಾಂಗ್ರೆಸ್ ಕಾರ್ಯ ಸಮಿತಿ ಸದಸ್ಯ ಕೂಡ ಆಗಿದ್ದರು.ಕೋಲ್ಕತ್ತ ವಿಶ್ವವಿದ್ಯಾಲಯದಲ್ಲಿ ನ್ಯಾಯಶಾಸನದಲ್ಲಿ ಮಾಸ್ಟರ್ಸ್ ಪದವಿ ಪಡೆದಿದ್ದ ಅವರು ನ್ಯಾಯವಾದಿ ಹಾಗು ಉಪನ್ಯಾಸಕರಾಗಿದ್ದರು.2012-2017 ವರೆಗೆ ಭಾರತದ 13 ನೇ ರಾಷ್ಟ್ರಪತಿಗಳಾಗಿದ್ದರು. ಪ್ರಣಬ್ ಮುಖರ್ಜಿ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಂತಾಪ ಸೂಚಿಸಿದ್ದಾರೆ

Leave a Reply

Your email address will not be published.