ಕರ್ನಾಟಕ ರಾಜ್ಯ ಪತ್ರಿಕೆಗಳ ಸಂಪಾದಕರ ಸಂಘದಲ್ಲಿ ರಾಜ್ಯ ನಿರ್ದೇಶಕರಾಗಿ ಎಸ್ ಟಿ ನವೀನ್ ಕುಮಾರ್ ಪದಗ್ರಹಣ

 ನಿತ್ಯವಾಣಿ, ಬೆಂಗಳೂರು/ ಚಿತ್ರದುರ್ಗ, ಜೂ.07 : ಕರ್ನಾಟಕ ರಾಜ್ಯ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘ ಬೆಂಗಳೂರಿನ ಶಿವಾನಂದ ಸರ್ಕಲ್ ಗಾಂಧಿ ಭವನದಲ್ಲಿ ಸೋಮವಾರ ರಾಜ್ಯ ಪದಾಧಿಕಾರಿಗಳ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಪದಗ್ರಹಣ ಸಮಾರಂಭ ಕಾರ್ಯಕ್ರಮ ನಡೆಯಿತು,              ಪದಗ್ರಹಣ ಸಮಾರಂಭ ಕಾರ್ಯಕ್ರಮ ಉದ್ಘಾಟನೆ          ಚಿತ್ರದುರ್ಗದ ನಿತ್ಯವಾಣಿ ಪತ್ರಿಕೆಯ ಸಂಪಾದಕರಾದ ಎಸ್ ಟಿ ನವೀನ್ ಕುಮಾರ್ ಅವರನ್ನು ಪದಗ್ರಹಣ ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾll ಪಿ ಎಸ್ ಹರ್ಷ ಹಾಗೂ ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಪದಗ್ರಹಣ ಪತ್ರವನ್ನು ನೀಡಿ ಸನ್ಮಾನಿಸಿ ಗೌರವಿಸಿದರು, ಕರ್ನಾಟಕ ರಾಜ್ಯ ಜಿಲ್ಲಾ ಮತ್ತು ಪ್ರಾದೇಶಿಕ ಸಂಘದ ರಾಜ್ಯ ಪದಾಧಿಕಾರಿಗಳ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿಯ ನೂತನ ಸದಸ್ಯರು ಈ ಸಂದರ್ಭದಲ್ಲಿ ಚಿತ್ರದುರ್ಗದಿಂದ  ಚಂದ್ರವಳ್ಳಿ ಪತ್ರಿಕೆ ಸಂಪಾದಕರಾದ ಹೆಂಜಾರಪ್ಪ, ಬ್ರಹ್ಮಗಿರಿ ಪತ್ರಿಕೆ ಸಂಪಾದಕರಾದ ಎಸ್ ಶ್ರೀನಿವಾಸ್ ಉಪಸ್ಥಿತರಿದ್ದರು

Leave a Reply

Your email address will not be published.