ಕನ್ನಡಿಗರ ಮೇಲೆ ಮಹಾರಾಷ್ಟ್ರ ದಾಂದಲೆ ಖಂಡಿಸಿ ಕರವೇ ಪ್ರತಿಭಟನೆ

 

ನಿತ್ಯವಾಣಿ, ಚಿತ್ರದುರ್ಗ, ಡಿ.08 : ಬೆಳಗಾವಿ ವಿವಾದವನ್ನು ಕೆಣಕಿ ಕನ್ನಡಿಗರ ಮೇಲೆ ಹಾಗೂ ಆಸ್ತಿ ಪಾಸ್ತಿಗಳ ಮೇಲೆ ಮಹಾರಾಷ್ಟ್ರ ಮತ್ತೆ ದಾಳಿ ನಡೆಸುತ್ತಿದೆ ಕನ್ನಡಿಗರ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಿದೆ ಅದರಿಂದ ಎಂಇಎಸ್ ಸಂಘಟನೆಯನ್ನು ಬ್ಯಾನ್ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಪ್ರತಿಭಟನೆಯನ್ನು ನಡೆಸಿದರು.

ನಗರದಲ್ಲಿ ಗುರುವಾರ ಗಾಂಧಿ ವೃತ್ತದಿಂದ ಪ್ರತಿಭಟನೆ ಮೆರವಣಿಗೆ ಆರಂಭಿಸಿ ದಾರಿ ಉದ್ದಕ್ಕೂ ಮಹಾರಾಷ್ಟ್ರದ ವಿರುದ್ಧ ಘೋಷಣೆಗಳನ್ನು ಪ್ರತಿಭಟನಾಕಾರರು ಕೂಗುತ್ತಾ ಮೆರವಣಿಗೆ ಸಾಗಿತು ನಗರದ ಡಿಸಿ ಸರ್ಕಲ್ ಬಳಿ ಮಾನವನ ವಿಕೃತಿಯನ್ನು ದಹನ ನಡೆಸಿದರು.

ಭಾಷಾವಾರು ಪ್ರಾಂತ್ಯ ವಿಂಗಡಣೆಯ ನಂತರ ಕರ್ನಾಟಕ ಅನೇಕ ಕನ್ನಡದ ಪ್ರದೇಶಗಳನ್ನು ಕಳೆದುಕೊಂಡರೂ ರಾಷ್ಟ್ರೀಯ ಐಕ್ಯತೆಗೆ ಭಂಗ ಆಗಬಾರದೆಂದು ನಿಟ್ಟಿನಲ್ಲಿ ಅನೇಕ ರಾಜ್ಯದ ಮೇಲೆ ನಡೆಯುತ್ತಿರುವ ಅನ್ಯಾಯಗಳನ್ನು ಸಹಿಸಿಕೊಂಡು ಬಂದಿದೆ.

ಕನ್ನಡದ ನೆಲವಾದ ಬೆಳಗಾವಿ ನಮಗೆ ಸೇರಬೇಕು ಎಂದು ಮಹಾರಾಷ್ಟ್ರ ದಶಕಗಳಿಂದ ಕ್ಯಾತೆ ತೆಗೆಯುತ್ತ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣ ಮಾಡುತ್ತಿದೆ. ಮಹಾರಾಷ್ಟ್ರದ ಒತ್ತಡದಿಂದಲೇ ಕೇಂದ್ರ ಸರ್ಕಾರದಿಂದ ರಚಿಸಲ್ಪಟ್ಟ ಮೆಹರ್ ಚಂದ್ ಮಹಾಜನ್‌ ಏಕಸದಸ್ಯ ಆಯೋಗ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕೆಂದು ತೀರ್ಪು ನೀಡಿದೆ. ಆದರೆ ಇದನ್ನು ಒಪ್ಪದ ಮಹಾರಾಷ್ಟ್ರ ಸರ್ಕಾರ ಮತ್ತು ಅಲ್ಲಿನ ರಾಜಕಾರಣಿಗಳು ದಶಕಗಳಿಂದ ಬೆಳಗಾವಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರ ನಡುವೆ ಸಂಘರ್ಷದ ವಾತಾವರಣವನ್ನು ನಿರ್ಮಿಸುತ್ತಿವೆ.

ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿಸಿ (ಎಂಇಎಸ್) ಗೂಂಡ ಸಂಘಟನೆಗೆ ಹಣಕಾಸಿನ ಬೆಂಬಲ ನೀಡಿ, ಗಡಿ ಭಾಗದಲ್ಲಿ ದಾಂದಲೆ ನಡೆಸಲು, ಕನ್ನಡಿಗರ ಮೇಲೆ ದಾಳಿ ನಡೆಸುತ್ತಿದೆ. ಬೆಳಗಾವಿ ವಿವಾದವು ಈಗ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ. ಇಂಥ ಸಂದರ್ಭದಲ್ಲಿ ರಾಜ್ಯದ ಗಡಿ ವಿಚಾರವಾಗಿ ಮಹಾರಾಷ್ಟ್ರ ಹಾಗೂ ಕರ್ನಾಟಕ ನಡುವೆ ಉದಿಗ್ನ ಪರಿಸ್ಥಿತಿ ಉಂಟಾಗಿದೆ.ರಾಜ್ಯದ ಈ ನೆಲದ ಕಾನೂನಿಗೆ ಗೌರವ ನೀಡಿ ತೀರ್ಪಿಗಾಗಿ ಕಾಯುವ ಬದಲು ಬೆಳಗಾವಿಯಲ್ಲಿ ಸಂಘರ್ಷ ಮಾಡಿಸಲು ಯತ್ನಿಸಲಾಗುತ್ತಿದೆ.

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ಮಾಡುವುದರ ಮೂಲಕ ಎಂಇಎಸ್‌ ಸಂಘಟನೆಯನ್ನು ನಿಷೇದಿಸಬೇಕೆಂಬ ಒತ್ತಾಯವನ್ನು ಮಾಡಿಸುತ್ತಾ ಬಂದಿದೆ. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ವಿನಾಕಾರಣ ದೌರ್ಜನ್ಯ ಮಾಡಲಾಗುತ್ತಿದೆ. ಕನ್ನಡಿಗರ ಆಸ್ತಿ ಪಾಸ್ತಿಗಳ ಮೇಲೆ ದಾಳಿಯಾಗುತ್ತಿದೆ. ಕನ್ನಡಿಗರು ಕಟ್ಟಿದ ಸಂಸ್ಥೆಗಳನ್ನು ಗುರಿಯಾಗಿಟ್ಟುಕೊಂಡು ವಿಧ್ವಂಸಕ ಕೃತ್ಯಗಳನ್ನು ನಡೆಸುತ್ತಿದ್ದಾರೆ. ಕನ್ನಡಿಗರ ಮೇಲಿನ ದಾಳಿ ದೌರ್ಜನ್ಯಗಳು ಭಯೋತ್ಪಾದನೆಗೆ ಸಮನಾದ ಕೃತ್ಯಗಳನ್ನು ಎಸಗುತ್ತಿದ್ದಾರೆ.

ಮಹಾರಾಷ್ಟ್ರದ ಬಹುತೇಕ ಎಲ್ಲಾ ರಾಜಕೀಯ ಪಕ್ಷಗಳು ಕನ್ನಡಿಗರ ವಿರುದ್ಧ ನಡೆಯುತ್ತಿರುವ ದಾಳಿಗಳಿಗೆ ಪ್ರಚೋದನೆ ನೀಡುತ್ತಿವೆ. ಶಿವಸೇನೆಯ ಎರಡು ಬಣಗಳು ಮತ್ತು ಎನ್.ಸಿ.ಪಿ ಮತ್ತು ಎಂಇಎಸ್ ಪಕ್ಷಗಳ ಕನ್ನಡಿಗರ ಮೇಲೆ ನೇರವಾಗಿ ಗುರಿ ಇಟ್ಟಿವೆ.
ಬೆಳಗಾವಿಯಲ್ಲಿ ಶಾಂತಿ ಕದಡುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ಕೂಡಲೇ ನಿಷೇಧಿಸಿ ಆದರ ಮುಖಂಡರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಮಹಾರಾಷ್ಟ್ರದ ಕನ್ನಡಿಗರ ರಕ್ಷಣೆಗೆ ರಾಜ್ಯದ ಮುಖ್ಯಮಂತ್ರಿ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳಬೇಕು. ಪ್ರಧಾನಮಂತ್ರಿ ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಟಿ.ರಮೇಶ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ತಾಲೂಕ ಅಧ್ಯಕ್ಷ ರಾಜಪ್ಪ, ನಗರ ಅಧ್ಯಕ್ಷ ರಮೇಶ್, ಜಿಲ್ಲಾ ಪ್ರಧಾನ ಸಂಚಾಲಕ ಗಣೇಶ್, ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್, ಶಿವಮೂರ್ತಿ, ಚಳ್ಳಕೆರೆ ತಾಲೂಕ ಅಧ್ಯಕ್ಷ ವೆಂಕಟೇಶ್, ಹಿರಿಯೂರು ತಾಲೂಕು ಅಧ್ಯಕ್ಷ ಉದಯ ಶಂಕರ್, ಜಿಲ್ಲಾ ಯುವ ಘಟಕ ಅಧ್ಯಕ್ಷ ಘನಶ್ಯಾಮ್, ಹಿರಿಯೂರು ತಾಲೂಕು ಗೌರವಾಧ್ಯಕ್ಷ ಬಸವರಾಜ್, ತಾಲೂಕು ಪ್ರಧಾನ ಕಾರ್ಯದರ್ಶಿ ದಾದಾಪೀರ್, ರಾಮಕೃಷ್ಣಪ್ಪ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಚಂದ್ರಕಲಾ, ತಾಲೂಕು ಮಹಿಳಾ ಘಟಕದ ಅಧ್ಯಕ್ಷ ದ್ರಾಕ್ಷಾಯಿಣಿ, ಹಾಗೂ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

Leave a Reply

Your email address will not be published.