ದರ್ಶನ್ ಗೆ ಭರ್ಜರಿ ಯಶಸ್ಸು, ‘ರಾಬರ್ಟ್’ ರಿಲೀಸ್ ಗೆ ಗ್ರೀನ್ ಸಿಗ್ನಲ್

ತೆಲುಗಿನಲ್ಲಿ ಮಾರ್ಚ್ 11 ರಂದು ‘ರಾಬರ್ಟ್’ ಸಿನಿಮಾ ಬಿಡುಗಡೆ ಮಾಡಲು ಗ್ರೀನ್ ಸಿಗ್ನಲ್ ನೀಡಲಾಗಿದೆ. 100 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಸೌತ್ ಫಿಲಂ ಚೇಂಬರ್ ನಲ್ಲಿ ಒಪ್ಪಿಗೆ ನೀಡಲಾಗಿದೆ.

ಮಾರ್ಚ್ 11 ರಂದು ಕನ್ನಡ ಮತ್ತು ತೆಲುಗಿನಲ್ಲಿ ‘ರಾಬರ್ಟ್’ ರಿಲೀಸ್ ಆಗಲಿದೆ. ಕರ್ನಾಟಕ ಫಿಲಂ ಚೇಂಬರ್ ಅಧ್ಯಕ್ಷ ಜಯರಾಜ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘ರಾಬರ್ಟ್’ ಬಿಡುಗಡೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಮಾರ್ಚ್ 11ರಂದು ತೆಲುಗಿನಲ್ಲಿಯೂ ಬಹುನಿರೀಕ್ಷಿತ ‘ರಾಬರ್ಟ್’ ಬಿಡುಗಡೆ ಮಾಡಲು ದಕ್ಷಿಣ ಭಾರತ ಫಿಲಂ ಚೇಂಬರ್ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಹೇಳಲಾಗಿದೆ.

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಬಿಡುಗಡೆಗೆ ತೆಲುಗು ನಿರ್ಮಾಪಕರು ಮೊದಲಿಗೆ ಒಪ್ಪಿ ಬಳಿಕ ನಿರಾಕರಿಸಿದ್ದರು, ಈ ಬಗ್ಗೆ ದರ್ಶನ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು.

Leave a Reply

Your email address will not be published.