ʼಏ.11ʼರ ಬಳಿಕ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ: ʼಯೆಲ್ಲೋ ಅಲರ್ಟ್ʼ ಘೋಷಣೆ..!

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 11ರ ಬಳಿಕ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನ ನೀಡಿದ್ದು, ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಏಪ್ರಿಲ್ 13 ಹಾಗೂ 14 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದಿರುವ ಹವಮಾನ ಇಲಾಖೆ, ಯೆಲ್ಲೋ ಅಲರ್ಟ್ ಘೋಷಿಸಿದೆ.ಇನ್ನು ಅದೇ ಎರಡು ದಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಸೇರಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ.

Leave a Reply

Your email address will not be published.