BREAKING: 2 ಎ ಮೀಸಲಾತಿಗೆ ಸ್ವಾಮೀಜಿಗಳ ನೇತೃತ್ವದಲ್ಲಿ ರಸ್ತೆ ತಡೆ – ಸಿಎಂ, ಸರ್ಕಾರದ ವಿರುದ್ಧ ಆಕ್ರೋಶ, ಹೆದ್ದಾರಿ 4 ರಲ್ಲಿ ಸಂಚಾರ ಅಸ್ತವ್ಯಸ್ತ

ಚಿತ್ರದುರ್ಗ: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಹೋರಾಟ ಮುಂದುವರೆಸಲಾಗಿದೆ.

ಸ್ವಾಮೀಜಿಗಳ ನೇತೃತ್ವದಲ್ಲಿ ಪಾದಯಾತ್ರೆ ಕೈಗೊಂಡಿದ್ದ ಸಮುದಾಯದ ಜನ, ಸದನದಲ್ಲಿ ಮೀಸಲಾತಿ ನೀಡಲಾಗುವುದಿಲ್ಲ ಎಂದು ಹೇಳುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂಚಮಸಾಲಿ ಶ್ರೀಗಳ ನೇತೃತ್ವದಲ್ಲಿ ಹೆದ್ದಾರಿ ತಡೆದು ಧರಣಿ ನಡೆಸಲಾಗಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಜಯಮೃತ್ಯುಂಜಯ ಶ್ರೀಗಳು, ವಚನಾನಂದ ಶ್ರೀಗಳ ನೇತೃತ್ವದಲ್ಲಿ ಧರಣಿ ನಡೆಸಲಾಗಿದ್ದು, ಧರಣಿ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.

Leave a Reply

Your email address will not be published.