ಚಿತ್ರದುರ್ಗ ಜ. 13 : ವಾಹನ ಸವಾರರು ಕಡ್ಡಾಯವಾಗಿ ರಸ್ತೆ ಸಂಚಾರಿ ನಿಯಮಗಳು ಸರಿಯಾಗಿ ಪಾಲಿಸಬೇಕೆಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಹೇಳಿದರು.
ನಗರದ ಗಾಂಧಿ ವೃತ್ತದಲ್ಲಿ ಬುಧವಾರ ಸಂಜೀವಿನಿ ಜೀವರಕ್ಷಕ ಟ್ರಸ್ಟ್‍ನಿಂದ ಆಯೋಜಿಸಿದ್ದ ಬೃಹತ್ ಹೆಲ್ಮೆಟ್ ಸಾರ್ವಜನಿಕ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹೆಲ್ಮೆಟ್ ಬಳಸುವುದರಿಂದ ಬೈಕ್ ಸವಾರರು ತಮ್ಮ ಪ್ರಾಣ ಉಳಿಸಿಕೊಳ್ಳಬಹುದು ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಈ ಜಾಗೃತಿ ಕೆಲಸ ಮಾಡುತ್ತಿರುವುದು ಸಂತಸ ತಂದಿದೆ ಎಂದರು.
ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ಸಂಜೀವಿನಿ ಜೀವರಕ್ಷಕ ಟ್ರಸ್ಟ್ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡುತ್ತಿರುವುದು ಉತ್ತಮ ಕೆಲಸ. ಬೈಕ್ ಸವಾರರು ಹೆಲ್ಮೆಟ್ ಬಳಸುವುದರಿಂದ ತಮ್ಮ ಸುರಕ್ಷತೆ ಜತೆಗೆ ಜೀವ ಉಳಿಸಿ ಕೊಳ್ಳಬಹುದು ಎಂದು ಹೇಳಿದರು.
ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಕೆ.ಮಂಜುನಾಥ್ ಮಾತನಾಡಿ, ಯುವಕರಲ್ಲಿ ರಸ್ತೆ ಸಂಚಾರಿ ನಿಯಮಗಳ ಬಗ್ಗೆ ಹೆಚ್ಚಿನ ಕಾಳಜಿ ಇರಬೇಕು ಮತ್ತು ನಿಯಮಗಳನ್ನು ತಪ್ಪದೆ ಪಾಲಿಸಬೇಕು. ಸಂಜೀವಿನಿ ಜೀವರಕ್ಷಕ ಟ್ರಸ್ಟ್ ಹೆಲ್ಮೆಟ್ ಜಾಗೃತಿ ಕಾರ್ಯಕ್ರಮವಾಗಿದೆ ಎಂದರು.
ಆರ್ಟಿಒ ಜಿ.ಎಸ್.ಹೆಗ್ಡೆ ಮಾತನಾಡಿ, ಸಂಚಾರಿ ನಿಯಮಗಳು ಸಾರ್ವಜನಿಕರಲ್ಲಿ ಅರಿವು ಮೂಡಿದಾಗ ಮಾತ್ರ ಅಪಘಾತಗಳ ಸಂಖ್ಯೆ ಕಡಿಮೆ ಆಗುತ್ತದೆ. ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಬಳಸಿ ಜೀವ ಉಳಿಸಿಕೊಳ್ಳಬೇಕು ಎಂದು ಹೇಳಿದರು.
ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಅಧ್ಯಕ್ಷ ಡಿ.ರಂಗಸ್ವಾಮಿ, ಮಾರ್ಗ ನೇಚರ್ ಅಂಡ್ ಸೋಷಿಯಲ್ ಸರ್ವಿಸ್ ಅಧ್ಯಕ್ಷ ಸಿ.ಪ್ರಶಾಂತ್ ಕುಮಾರ್, ಟಾರ್ಗೆಟ್ ಟೆನ್ ಥೌಸೆಂಡ್ ಅಧ್ಯಕ್ಷ ಸಿದ್ದರಾಜು, ಸೌಮ್ಯ ಮಂಜುನಾಥ್ ಉಪಸ್ಥಿತರಿದ್ದರು.