ನಾಗರಾಜ್ ಕೆ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಆಯ್ಕೆ

ನಿತ್ಯವಾಣಿ, ಚಿತ್ರದುರ್ಗ,(ಸೆ.19) : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಘವಾದ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಶನಿವಾರ  ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ನಡೆದ *ಚಿಂತನ ಮಂಥನ* ಕಾರ್ಯಕ್ರಮದಲ್ಲಿ ಜಿಲ್ಲಾ ಘಟಕದ ಹಂಗಾಮಿ ಅಧ್ಯಕ್ಷರನ್ನಾಗಿ ಇಂದು ಚಿತ್ರದುರ್ಗ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನೌಕರರು ಸರ್ವಾನುಮತದಿಂದ *ನಾಗರಾಜ್ ಕೆ ಸಣ್ಣ* ಸಣ್ಣ ನೀರಾವರಿ ಇಲಾಖೆ ಇವರನ್ನು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಇವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಮಂಜುನಾಥರವರು ಹಾಗೂ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ನೌಕರರು ಶುಭಕೋರಿದ್ದಾರೆ.

Leave a Reply

Your email address will not be published.