ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಆಯೋಜನೆ

ಚಿತ್ರದುರ್ಗ ಜ. 20
ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ  ಕಾರ್ಯಕ್ರಮವು ಜ. 29 ಮತ್ತು 30 ರಂದು ಆಯೋಜಿಸಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ತಿಳಿಸಿದರು.
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಆಯೋಜಿಸಲಾಗಿದ್ದು, ಇದರಲ್ಲಿ ಪುರುಷರಿಗೆ 45 ವರ್ಷ ಹಾಗೂ 45 ವರ್ಷ ಮೇಲ್ಪಟ್ಟವರಿಗೆ ಮಹಿಳೆಯರಲ್ಲಿ 40 ವರ್ಷ ಮತ್ತು 40 ವರ್ಷ ಮೇಲ್ಪಟ್ಟ ನೌಕರರಿಗೆ ಪ್ರತ್ಯೇಕವಾಗಿ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.
ಈ ಬಾರಿ ಪ್ರಥಮವಾಗಿ 2020ನೇ ಸಾಲಿನಲ್ಲಿ ನಡೆದ ರಾಜ್ಯ ಹಾಗೂ ಅಖಿಲ ಭಾರತ ನಾಗರಿಕ ಸೇವಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ, ದ್ವೀತೀಯ ಹಾಗೂ ತೃತೀಯ ಸ್ಥಾನಗಳಿಸಿದ ಕ್ರೀಡಾಪಟುಗಳಿಗೆ ಸನ್ಮಾನ, ಕ್ರೀಡೆಯಲ್ಲಿ ಗಳಿಸಿದ ಅಂಕಗಳನ್ನು ಆಧರಿಸಿ ಹೆಚ್ಚು ಅಂಕಗಳನ್ನು ಪಡೆದ ಮೊದಲ ಸ್ಥಾನ ಪಡೆದ ತಾಲ್ಲೂಕಿಗೆ ಈ ಭಾರಿ ರೋಲಿಂಗ್ ಟ್ರೋಫಿಯನ್ನು ನೀಡಲಾಗುತ್ತದೆ. ಸತತವಾಗಿ ಮೂರು ಬಾರಿ ರೋಲಿಂಗ್ ಟ್ರೋಫಿಯನ್ನು ಪಡೆದವರಿಗೆ ಟ್ರೋಫಿಯನ್ನು ಹಸ್ತಾಂತರ ಮಾಡಲಾಗುತ್ತದೆ ಎಂದು ತಿಳಿಸಿದರು.
ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಸರ್ಕಾರದ ಆದೇಶದಂತೆ ಎರಡು ದಿನಗಳ ಕಾಲ ವಿಶೇಷ ಸಾಂದರ್ಭಿಕ ರಜೆಯನ್ನು ಪಡೆಯಬಹುದಾಗಿದೆ. ಈ ಭಾರಿ ಕೂನೆಯ ದಿನದಂದು ಜೀಕನ್ನಡ ಸರಿಗಮ-17 ನಲ್ಲಿನ ಆಶ್ವಿನ್ ಶರ್ಮ ಹಾಗೂ ವಿಶ್ವತಾ ಭಟ್ ಇವರಿಂದ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಎಂದು ಮಂಜುನಾಥ್ ತಿಳಿಸಿ ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟಕ್ಕೂ ಸಹಾ ಆಯ್ಕೆ ಕಾರ್ಯಕ್ರಮ ನಡೆಯಲಿದೆ. ನೌಕರರು ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡಿದರು.
ಗೋಷ್ಟಿಯಲ್ಲಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್, ರಾಜ್ಯ ಪರಿಷತ್ ಸದಸ್ಯ ತಿಮ್ಮಾರೆಡ್ಡಿ, ಖಂಜಾಚಿ ವಿರೇಶ್, ಕ್ರೀಡಾ ಇಲಾಖೆಯ ತರಬೇತಿದಾರರಾದ ಮಹಿಬುಲ್ಲಾ, ಜಯಂತಿ ಸೇರಿದಂತೆ ಇತರರು ಭಾಗವಹಿಸಿದ್ದರು.

Leave a Reply

Your email address will not be published.