ನಿತ್ಯವಾಣಿ,ಭರಮಸಾಗರ,(ಅ.11) : ಇಲ್ಲಿಗೆ ಸಮೀಪದ ಕೆ.ಆರ್.ಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶೇ. 100 ರಷ್ಟು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು
ಉತ್ತೀರ್ಣರಾಗಿದ್ದಾರೆ ಎಂದು ಪ್ರಾಂಶುಪಾಲ ಎಸ್. ಶಶಿಕಿರಣ ಪತ್ರಿಕಾಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.
ಈ ಶಾಲೆಯಲ್ಲಿ ಪರೀಕ್ಷೆಗೆ ಕುಳಿತ 44 ವಿದ್ಯಾರ್ಥಿಗಳ ಪೈಕಿ 36 ವಿದ್ಯಾರ್ಥಿಗಳು ಎ+ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕೋವಿಡ್ ಸಂಕಷ್ಟಕಾಲದಲ್ಲಿ ವಿದ್ಯಾರ್ಥಿಗಳು ಮನೆಯಲ್ಲೇ ಕುಳಿತು, ಆನ್‌ಲೈನ್ ಪಾಠವನ್ನು ಕೇಳುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಈ ಫಲಿತಾಂಶ ಬರಲು ಕಾರಣ ಎಲ್ಲಾ ಶಿಕ್ಷಕರ ಅವಿರತ ಶ್ರಮವಾಗಿದೆ. ಹೀಗಾಗಿ ಎಲ್ಲಾ ಸಿಬ್ಬಂದಿ ವರ್ಗಕ್ಕೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಾಂಶುಪಾಲರು ಹೇಳಿದರು.