ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಯ ಕಾವು ಜೋರಾಗಿದ್ದು, ಫೆಬ್ರವರಿ 2 ರಂದು ಕೇಂದ್ರ ಮತ್ತು ರೈತರ ಮಧ್ಯೆ ಮುಂದಿನ ಸುತ್ತಿನ ಮಾತುಕತೆ ನಡೆಯಲಿದೆ.
ಇನ್ನೂ. ಕೇಂದ್ರ ಸರ್ಕಾರದ ನೂತನ ಕೃಷಿ ಕಾಯಿದೆ ವಿರೋಧಿಸಿ ರೈತರು ಜನವರಿ 26 ರಂದು ಟ್ರಾಕ್ಟರ್ ರ್ಯಾಲಿ ನಡೆಸಿದ್ದರು. ಇದರಿಂದ ದೆಹಲಿಯಲ್ಲಿ ಭಾರೀ ಹಿಂಸಾಚಾರಕ್ಕೆ ಕಾರಣವಾಗಿತ್ತು. ಇದೀಗ ಕೇಂದ್ರ ಸರ್ಕಾರದ ಗಮನ ಸೆಳೆಯಲು ಫೆಬ್ರವರಿ 6 ರಂದು ರಾಜ್ಯ- ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗುವುದು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಹೇಳಿದೆ. ಫೆ. 6 ರಂದು ರಾಜ್ಯ- ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು . ಅಂದು ದೇಶದ ಎಲ್ಲಾ ರಾಜ್ಯಗಳ ಹೆದ್ದಾರಿಯನ್ನು ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದೆ.
. ಕೇಂದ್ರ ಸರ್ಕಾರ ಕಾಯ್ದೆಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕು. ಹಾಗಾದರೆ ಮಾತ್ರ ಅದು ಸರ್ಕಾರಕ್ಕೆ ಮತ್ತು ರೈತರಿಗೆ ಅನುಕೂಲವಾಗಲಿದೆ ಎಂದು ರೈತರು ಒತ್ತಾಯಿಸುತ್ತಾ ಬರುತ್ತಿದ್ದಾರೆ. ಫೆಬ್ರವರಿ 2 ರಂದು ಕೇಂದ್ರ ಮತ್ತು ರೈತರ ಮಧ್ಯೆ ಮುಂದಿನ ಸುತ್ತಿನ ಮಾತುಕತೆ ನಡೆಯಲಿದೆ ಎನ್ನಲಾಗಿದೆ.