ಕಿಚ್ಚನ ಹುಟ್ಟು ಹಬ್ಬಕ್ಕೆ ಕೋಟಿಗೊಬ್ಬ ಚಿತ್ರತಂಡದಿಂದ ಭರ್ಜರಿ ಸರ್ಪ್ರೈಸ್!

ಬೆಂಗಳೂರು:- ಸ್ಯಾಂಡಲ್‌ವುಡ್ ಸ್ಟಾರ್ ಸುದೀಪ್ ಹುಟ್ಟುಹಬ್ಬಕ್ಕೆ ಎಲ್ಲೆಡೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ರೆ, ಆತ್ತ ಸಿನಿಮಾ ತಂಡ ಕೂಡ ಕಿಚ್ಚನ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಡಲು ಮುಂದಾಗಿದ್ದಾರೆ.

ಸೆಪ್ಟೆಂಬರ್ 2 ರಂದು ಕಿಚ್ಚ ಸುದೀಪ್ 48ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನೆಲೆ ಅಭಿಮಾನಿಗಳು ಎಲ್ಲೆಡೆ ಬರ್ತಡೇ ಸೆಲೆಬ್ರೇಷನ್ ಮಾಡಲು ಮುಂದಾಗಿದ್ದಾರೆ. ಇದೇ ಸಮಯದಲ್ಲಿ ಕೋಟಿಗೊಬ್ಬ – 3 ಸಿನಿಮಾ ತಂಡ ಟೀಸರ್ ರಿಲೀಸ್ ಮಾಡಲು ಮುಂದಾಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆನಂದ್ ಆಡಿಯೋ ಸಂಸ್ಥೆ, ಸುದೀಪ್ ಹುಟ್ಟುಹಬ್ಬಕ್ಕೆ ಕೋಟಿಗೊಬ್ಬ-3 ಟೀಸರ್ ಬಿಡುಗಡೆ ಮಾಡುವ ಬಗ್ಗೆ ತಿಳಿಸಿದ್ದು, ಇದರಿಂದಾಗಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

Leave a Reply

Your email address will not be published.