ಬೆಂಗಳೂರು : ಇತ್ತೀಚೆಗಷ್ಟೇ ಐಎಎಸ್ ಅಧಿಕಾರಿಗಳ ಮಟ್ಟದಲ್ಲಿ ಭಾರೀ ಬದಲಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಐಪಿಎಸ್ ಅಧಿಕಾರಿಗಳಿಗೂ ವರ್ಗಾವಣೆಯ ಬಿಸಿ ಮುಟ್ಟಿಸಿದೆ. ಇಂದು ಸಂಜೆ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ದಿಢೀರನೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಐಪಿಎಸ್ ಅಧಿಕಾರಿಗಳ ಪೈಕಿ ಐವರು ಎಡಿಜಿಪಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿದ್ದ ಭಾಸ್ಕರ್ ರಾವ್ ಅವರನ್ನು ರೈಲ್ವೆ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ ಎಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಅವರನ್ನು ಲೋಕಾಯುಕ್ತ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಲೋಕಾಯುಕ್ತ ಎಡಿಜಿಪಿಯಾಗಿದ್ದ ಐಪಿಎಸ್ ಅಧಿಕಾರಿ ಎಸ್. ಮೂರ್ತಿ ಅವರನ್ನು ಕರ್ನಾಟಕ ರಾಜ್ಯ ಪೊಲೀಸ್ ಹೌಸಿಂಗ್ ಕಾರ್ಪೊರೇಶನ್ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಐಪಿಎಸ್ ಅಧಿಕಾರಿ ಕೆ. ರಾಮಚಂದ್ರರಾವ್ ಅವರನ್ನು ಬಿಎಂಟಿಎಫ್ ಎಡಿಜಿಪಿಯಾಗಿ ಮತ್ತು ಅರುಣ್ ಜೇಜಿ ಚಕ್ರವರ್ತಿ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗ ಮಾಡಲಾಗಿದೆ.
# ಅಧಿಕಾರಿಗಳ ವರ್ಗಾವಣೆ ವಿವರ ಹೀಗಿದೆ. :
ಭಾಸ್ಕರ್ ರಾವ್-ಎಡಿಜಿಪಿ, ರೈಲ್ವೆ
ಪ್ರಶಾಂತ್ ಕುಮಾರ್ ಠಾಕೂರ್ – ಎಡಿಜಿಪಿ, ಲೋಕಾಯುಕ್ತ.
ಡಾ.ಎಸ್.ಮೂರ್ತಿ- ಎಡಿಜಿಪಿ ಮತ್ತು ವ್ಯವಸ್ಥಾಪಕ ನಿದೇರ್ಶಕರು
(ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ)
ಡಾ.ಕೆ.ರಾಮಚಂದ್ರರಾವ್- ಎಡಿಜಿಪಿ
(ಬೆಂಗಳೂರು ಮಹಾನಗರ ಕಾರ್ಯಪಡೆ)
ಅರುಣ್ ಚಕ್ರವರ್ತಿ- ಎಡಿಜಿಪಿ ಆಂತರಿಕ ಭದ್ರತಾ ವಿಭಾಗ.