ನಿತ್ಯವಾಣಿ,ಚಿತ್ರದುರ್ಗ, (ಆ.24) : ಜಿಲ್ಲಾ ಆರೋಗ್ಯ ಇಲಾಖೆಯ ಸಭಾಂಗಣದಲ್ಲಿ ಚಿತ್ರದುರ್ಗ ತಾಲ್ಲೂಕಿನ ಎಲ್ಲಾ ವೈದ್ಯಾಧಿಕಾರಿಗಳಿಗೆ, ಅರೆ ವೈದ್ಯಕೀಯ ಸಿಬ್ಬಂದಿಗಳಿಗೆ ನ್ಯುಮೊಕಾಕಲ್ ಕಾಂಜುಗೇಟ್ ಲಸಿಕಾ ತರಬೇತಿಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ವೈದ್ಯಾಧಿಕಾರಿ ಡಾ.ಆರ್.ರಂಗನಾಥ್” ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿಯಲ್ಲಿ ನ್ಯುಮೊಕಾಕಲ್ ಖಾಯಿಲೆಯಿಂದ ಮಕ್ಕಳನ್ನು ರಕ್ಷಿಸಲು (PCV) ನ್ಯುಮೊಕಾಕಲ್ ಕಾಂಜುಗೇಟ್ ಲಸಿಕೆಯನ್ನು ಪರಿಚಯಿಸಲಾಗಿದೆ, ಮಕ್ಕಳ ರಕ್ಷಣೆಗಾಗಿ ಸಾಮಾಜಿಕ ಕಳಕಳಿಯಿಂದ ಈ ಲಸಿಕೆಯನ್ನು ಮಕ್ಕಳಿಗೆ ನೀಡಲು ಸರ್ಕಾರದ ಮಾರ್ಗಸೂಚಿಯಂತೆ ಗ್ರಾಮೀಣ ಮಟ್ಟದ ಪ್ರಾಥಮಿಕ ಅರೋಗ್ಯ ಕೇಂದ್ರ ಉಪ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ಅರೆ ವೈದ್ಯಕೀಯ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗುತ್ತಿದೆ” ಎಂದು ತಿಳಿಸಿದರು.
ಇದೇ ಸಂಧರ್ಭದಲ್ಲಿ ಚಿತ್ರದುರ್ಗ ತಾಲ್ಲೂಕು ವೈದ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ತರಬೇತಿಯಲ್ಲಿ ಲಸಿಕೆ ನೀಡುವ ಕ್ರಮ ಅವಧಿಯ ಬಗ್ಗೆ ತಿಳಿಸಿದರು. ಕಾರ್ಯಾಗಾರದಲ್ಲಿ ಡಾ.ರೇಣುಪ್ರಸಾದ್ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ, ಡಾ.ಕಾಶಿ ಜಿಲ್ಲಾ ಕೀಟಜನ್ಯ ರೋಗಗಳ ನಿಯಂತ್ರಣಾಧಿಕಾರಿ, ಡಾ.ಕಾವ್ಯಶ್ರೀ ಕುಮಾರ್, ದಸ್ತಗೀರ್ ಸಂಪನ್ಮೂಲ ವ್ಯಕ್ತಿಗಳು ಎನ್.ಎಸ್.ಮಂಜುನಾಥ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ, ಮ್ಯಾನೇಜರ್ ಅಲಿ, ಪರವಿನ್ ಭಾಗವಹಿಸಿದ್ದರು.