ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ದಿನಾಂಕ 08.02.2021 ಮತ್ತು ದಿನಾಂಕ 09.02.2021 ರಂದು ದಾವಣಗೆರೆ ಜಿಲ್ಲೆಯ ಹರಿಹರ ತಾ. ರಾಜನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಮಹರ್ಷಿ ವಾಲ್ಮೀಕಿ ಜಾತ್ರೆ 2021 ರಲ್ಲಿ ಭಾಗವಹಿಸಲಿದ್ದಾರೆ.
ಈ ಜಾತ್ರಾ ಮಹೋತ್ಸವ ಸಮಿತಿಗೆ ಜಲಸಂಪನ್ಮೂಲ ಸಚಿವರು ಅಧ್ಯಕ್ಷರಾಗಿದ್ದು, ದಿ.09.02.2021ರಂದು ನಡೆಯುವ ಜನಜಾಗೃತಿ ಸಮಾವೇಶವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರು ಉದ್ಘಾಟನೆ ಮಾಡಲಿದ್ದಾರೆ. ಎರಡು ದಿನಗಳ ಈ ಜಾತ್ರಾ ಮಹೋತ್ಸವದಲ್ಲಿ ನಾಡಿನ ಹಿರಿಯ ಸ್ವಾಮಿಗಳು ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.