“ಹುಚ್ಚಾಸ್ಪತ್ರೆಯ ವಿಶೇಷ ಘಟಕದಲ್ಲಿ ಇರಬೇಕಾದ ಮುಖ್ಯಮಂತ್ರಿ ಯಡಿಯೂರಪ್ಪ ವಿಧಾನಸೌಧದಲ್ಲಿದ್ದಾರೆ, ಅವರಿಗೆ ವಿಧಾನಸೌಧವೇ ಹುಚ್ಚಾಸ್ಪತ್ರೆ” ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ವ್ಯಂಗ್ಯವಾಡಿದರು.
ಸೋಮವಾರ ರಾಮನಗರದ ಐಜೂರು ವೃತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ತಡೆದು ವಾಟಾಳ್ ನಾಗರಾಜ್ ಕರ್ನಾಟಕ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ಖಂಡಿಸಿದರು.”ಮರಾಠ ಪ್ರಾಧಿಕಾರ ಖಂಡಿಸಿ ಮೊದಲ ಹಂತದ ಹೋರಾಟ ನಡೆಸಿದ್ದೇವೆ. ಜನವರಿ 9ರಂದು ಎರಡನೇ ಹಂತದ ಹೋರಾಟದ ಅಂಗವಾಗಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರೈಲುಗಳನ್ನು ತಡೆದು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತೇವೆ” ಎಂದು ವಾಟಾಳ್ ನಾಗರಾಜ್ ಹೇಳಿದರು.