ನಿತ್ಯವಾಣಿ, ಚಿತ್ರದುರ್ಗ, ಜೂ.19 : ವಿಶ್ವಸಂಸ್ಥೆಯಲ್ಲಿ ಭಾರತದ ಹೆಮ್ಮೆಯ ಪ್ರಧಾನಿಗಳಾದ ನರೇಂದ್ರ ಮೋದಿಯವರು 2014 ರಲ್ಲಿ ವಿಶ್ವ ಸಂಸ್ಥೆಯಲ್ಲಿನ ತಮ್ಮ ಭಾಷಣದಲ್ಲಿ ಜೂನ್-21 ಅನ್ನು ಅಂತರಾಷ್ಟ್ರೀಯ ಯೋಗ ದಿನವೆಂದು ಘೋಷಿಸುವಂತೆ ಕರೆ ನೀಡಿದರು. ಅದರಂತೆ ಈ ಪ್ರಸ್ತಾವನೆಯನ್ನು 177 ದೇಶಗಳು ಪುರಸ್ಕರಿಸುವ ಮೂಲಕ ಅಂತರಾಷ್ಟ್ರೀಯ ಯೋಗ ದಿನದ ಪ್ರಸ್ತಾವನೆಯನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅಂಗೀಕಾರ ಮಾಡುವ ಮೂಲಕ
*ಮೊದಲ ಯೋಗ ದಿನವನ್ನು 2015ರ ಜೂನ್ 21 ರಂದು ವಿಶ್ವದಾದ್ಯಂತ ಆಚರಿಸಲು ನಿರ್ಧಾರ ಕೈಗೊಳ್ಳಲಾಯಿತು.*
ಈ ಎಲ್ಲಾ ಅಂಶಗಳನ್ನು ತಮ್ಮ ಗಮನಕ್ಕೆ ತರುತ್ತಾ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಹಾಗೂ ನೌಕರರ ಬಗ್ಗೆ ಅಪಾರ ಕಾಳಜಿ ಹೊಂದಿರುವ ಷಡಕ್ಷರಿಯವರ ನೀಡಿರುವ ಸೂಚನೆಯಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆಯು ಯೋಗ ದಿನಾಚರಣೆ ನಡೆಸಲು ತೀರ್ಮಾನಿಸಿರುವ ಸ್ಥಳಗಳಲ್ಲಿ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಮ್ಮಲ್ಲಿ ಮನವಿ ಮಾಡಲಾಗಿದೆ.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಆಯುಷ್ ಇಲಾಖೆಯು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಡೆಸಲು ತೀರ್ಮಾನಿಸಿರುವ ಸ್ಥಳಗಳು.
*ಚಿತ್ರದುರ್ಗದ ಕೋಟೆ ಮತ್ತು ಚಂದ್ರವಳ್ಳಿ ಆವರಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.*
ಈ ಮಾಹಿತಿಯನ್ನು ತಮ್ಮ ಪತ್ರಿಕೆಗಳಲ್ಲಿ ಪ್ರಕಟಿಸುವ ಮೂಲಕ ವ್ಯಾಪಕ ಪ್ರಚಾರ ನೀಡಿ ನೌಕರರು ಹಾಗೂ ಸಾರ್ವಜನಿಕರು ಭಾರತವು ವಿಶ್ವಕ್ಕೆ ಕೊಡುಗೆಯಾಗಿ ನೀಡಿರುವ ಯೋಗವನ್ನು ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಚಿತ್ರದುರ್ಗ ಜಿಲ್ಲಾ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದ ಜಿಲ್ಲಾಧ್ಯಕ್ಷ ಮಂಜುನಾಥ್ ಕೆ ಸರ್ಕಾರಿ ನೌಕರರಲ್ಲಿ ಮನವಿ ಮಾಡಿದ್ದಾರೆ